ನವದೆಹಲಿ : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ. ವಿವಾದ ಇತ್ಯರ್ಥಕ್ಕೆ ಮತ್ತೆ ಹೈಕೋರ್ಟ್ಗೆ ಹೋಗಿ – ಇದು ಸುಪ್ರೀಂ ನೀಡಿದ ಆದೇಶದ ಸಾರ. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಅನ್ನೋ ವಿಚಾರಕ್ಕೆ ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಕೊನೆಗೆ ಸುಪ್ರೀಂ ಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ ಎಂದು ಆದೇಶ ಪ್ರಕಟಿಸಿತು.ಚಾಮರಾಜಪೇಟೆ ಮೈದಾನದ ಗಣೇಶೋತ್ಸವ ಆಚರಣೆ ಅನುಮತಿ