ಚಂಡೀಗಢ : ಗಗನಚುಂಬಿ ಕಟ್ಟಡದ 20ನೇ ಮಹಡಿಯಿಂದ ಬಿದ್ದು, ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಅವರು ಮೃತಪಟ್ಟಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗುರುಗ್ರಾಮದ ಸೆಕ್ಟರ್ 54ರಲ್ಲಿರುವ ಡಿಎಲ್ಎಫ್ನ ದಿ ಕ್ರೆಸ್ಟ್ ಸೊಸೈಟಿಯ 20ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದಾರೆ ಎಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಿಎಲ್ಎಫ್ ಭದ್ರತಾ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.