ನವದೆಹಲಿ : ದೇಶದ ನಾನಾ ಕೈಗಾರಿಕಾ ವಲಯಗಳ ನಡುವೆ ಅಡೆತಡೆಯಿಲ್ಲದ ಸಂಪರ್ಕ ಕಲ್ಪಿಸಲು, ದೇಶದ ನಾನಾ ರಾಜ್ಯಗಳಲ್ಲಿ ಕೈಗೊಳ್ಳಲಾಗಿರುವ ಮೂಲಸೌಕರ್ಯ ಸಂಬಂಧಿತ ಯೋಜನೆಗಳನ್ನು 2025ರೊಳಗೆ ಪೂರ್ಣಗೊಳಿಸಲು ಹಾಗೂ ಅಪಾರ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯ ಗುರಿಯನ್ನು ಈಡೇರಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ‘ ಎಂಬ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದೇ 13ರಂದು ಈ ಆನ್ಲೈನ್ ಪೋರ್ಟಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. ಈ