ನವದೆಹಲಿ : ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ ಅವರು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿನ ನಮ್ಮ ಭಾಗವಹಿಸುವಿಕೆಯು