ಮುಂಬೈ : ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ(84) ಅವರು ವಿಧಿವಶರಾಗಿದ್ದಾರೆ.6 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಕುಮಾರ್ ಅವರು ಡಯಾಲಿಸಿಸ್ ಪಡೆಯುತ್ತಿದ್ದರು. ಆದರೆ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಕುಮಾರ್ ಶರ್ಮಾ ಅವರು ಸಂಗೀತ ನಿರ್ದೇಶಕರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಜಮ್ಮುವಿನಲ್ಲಿ ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ ಅವರು ತಮ್ಮ ಹದಿಮೂರನೇ ವಯಸ್ಸಿನಲ್ಲಿಯೇ ಸಂತೂರ್ ನುಡಿಸುವುದನ್ನು ಕಲಿಯಲು ಪ್ರಾರಂಭಿಸಿದರು. 1955ರಲ್ಲಿ ಮೊದಲ ಬಾರಿಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಸಂತೂರ್ ಪ್ರದರ್ಶನ