ನವದೆಹಲಿ : ಈ ಬಾರಿ ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡುವ ನಿರೀಕ್ಷೆ ಇದೆ. ಕೇಂದ್ರ ಬಜೆಟ್ 2023-24 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 10 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ