ನವದೆಹಲಿ : ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಕರಾಚಿಗೆ ತನ್ನ ಪಥ ಬದಲಿಸಿದ್ದು, ತುರ್ತು ಭೂಸ್ಪರ್ಶ ಮಾಡುವ ಮೊದಲೇ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ ದೆಹಲಿಯಿಂದ ಇಂಡಿಗೋ ಏರ್ ಲೈನ್ ಸಂಸ್ಥೆಯ 6ಇ-1736 ವಿಮಾನವು ಪ್ರಯಾಣ ಬೆಳೆಸಿದೆ. ವಿಮಾನ ಜರ್ನಿ ಆರಂಭವಾದ ಕೆಲ ಕ್ಷಣಗಳಲ್ಲಿ, ಪ್ರಯಾಣಿಕ ನೈಜೀರಿಯಾ ಮೂಲದ ಅಬ್ದುಲ್ಲಾ (60)ಗೆ ತೀವ್ರ ಅಸ್ವಸ್ಥತೆ ಕಾಡಿದೆ.