ನವದೆಹಲಿ: ನಿನ್ನೆ ವಿಧಿವಶರಾದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಮಂದಿ ಸೇರಿದ್ದಾರೆ.ಬಿಜೆಪಿ ಕಚೇರಿಯಿಂದ ಇದೀಗ ವಾಜಪೇಯಿ ಪಾರ್ಥಿವ ಶರೀರ ಅಂತ್ಯಕ್ರಿಯೆ ನಡೆಯುವ ರಾಷ್ಟ್ರೀಯ ಸ್ಮೃತಿ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಈ ವೇಳೆ ಪ್ರಧಾನಿ ಮೋದಿ, ಅಮಿತ್ ಶಾ ಮುಂತಾದ ಘಟಾನುಘಟಿ ನಾಯಕರು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.ಇವರ ಜತೆಗೆ ತಮ್ಮ ಮೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ರಸ್ತೆಯ ಇಕ್ಕೆಲೆಗಳಲ್ಲಿ