ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಕಟ್ಟಡದಿಂದ ಹಾರಿ ರೋಗಿಯೊಬ್ಬ ದುರ್ಮರಣವನ್ನಪ್ಪಿದ್ದಾನೆ. ಮೃತನನ್ನು ಶ್ರೀಧರ್ಗಡ್ಡೆ ನಿವಾಸಿ ಶ್ರೀಧರ್ ಎಂದು ಗುರುತಿಸಲಾಗಿದ್ದು ಶನಿವಾರ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸುವಾಗ ಅಸ್ವಸ್ಥರಾಗಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಆತ ಇದ್ದಕ್ಕಿದ್ದಂತೆ ವಿಚಿತ್ರವಾಗಿ ವರ್ತಿಸಲು ಆರಂಭಿಸಿದ್ದ ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ಜತೆಗೆ ಯಾರೂ ಇಲ್ಲದಿದ್ದ ಸಂದರ್ಭದಲ್ಲಾತ ಮೊದಲ ಮಹಡಿಯ ಕಿಟಕಿಯಿಂದ ಹಾರಿ ಆತ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ವಾರ್ಡ್ಗೆ