ಬೆಂಗಳೂರು (ಜುಲೈ 07): ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಬಂದಿದೆ. ಬುಧವಾರವೂ 50 ಪೈಸೆ ಪೆಟ್ರೋಲ್ ಬೆಲೆ ಏರಿಸಲಾಗಿದೆ. ಪರಿಣಾಮ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 103 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ.