ನವದೆಹಲಿ: ಕಳೆದ 70 ವರ್ಷಗಳಿಂದ ಕಾಂಗ್ರೆಸ್ ರೈತರಿಗೆ ಮೋಸವನ್ನೇ ಮಾಡುತ್ತಾ ಬಂದಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.ಪಂಜಾಬ್ ನಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ ಕಾಂಗ್ರೆಸ್ ಕಳೆದ 70 ವರ್ಷಗಳಿಂದ ರೈತರಿಗೆ ಸುಳ್ಳು ಭರವಸೆಗಳ ಮೂಲಕ ಮೋಸ ಮಾಡುತ್ತಾ ಬಂದಿದೆ. ರೈತರ ಭರವಸೆಗಳನ್ನು ಸುಳ್ಳು ಮಾಡುತ್ತಾ ಬಂದಿದೆ ಎಂದು ಆರೋಪಿಸಿದ್ದಾರೆ.ಎನ್ ಡಿಎ ಸರ್ಕಾರ 2022 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಹಾಕಿಕೊಂಡಿದೆ. ಇದನ್ನು ಮಾಡಿಯೇ ತೀರುತ್ತೇವೆ.