ನವದೆಹಲಿ: ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿರವುದಕ್ಕೆ ಇದೇ ಸಾಕ್ಷಿ. ಸಾಮಾಜಿಕ ಜಾಲತಾಣವನ್ನು ಯಶಸ್ವಿಯಾಗಿ ಬಳಸಿಕೊಳ್ಳುವ ಮೋದಿ, ಇನ್ ಸ್ಟಾಗ್ರಾಂನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನೇ ಹಿಂದಿಕ್ಕಿ ನಂ.1 ಸ್ಥಾನ ಪಡೆದಿದ್ದಾರೆ. ಇನ್ ಸ್ಟಾಗ್ರಾನಲ್ಲಿ 6.8 ಮಿಲಿಯನ್ ಫಾಲೋವರ್ ಗಳನ್ನು ಮೋದಿ ಹೊಂದಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದ್ದಾರೆ. ಅವರು 6.3 ಹಿಂಬಾಲಕರನ್ನು ಹೊಂದಿದ್ದಾರೆ. ಮೋದಿ ಒಟ್ಟು 53 ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.