ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಕೇಂದ್ರ ಸರಕಾರ ನಿರಂತರವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 10 ನಿಮಿಷಗಳ ವಿಡಿಯೋದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಮೋದಿ ಆಪ್ ವಿರುದ್ಧ ದಮನ್ ಚಕ್ರ ಪ್ರಯೋಗಿಸುತ್ತಿದ್ದಾರೆ ಎಂದು ಕಿಡಿಕಾರಿದರು. ನಮ್ಮ ಪಕ್ಷದ 10 ಶಾಸಕರನ್ನು ಬಂಧಿಸಲಾಗಿದೆ. ಆದಾಯ