ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಲಿನಿಂದಲೂ ಪ್ರತಿವರ್ಷ ಗಡಿಯಲ್ಲಿ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿಕೊಂಡು ಬಂದಂತೆ ಈ ವರ್ಷ ಕೂಡ ಯೋಧರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಈ ಬಾರಿ ಪ್ರಧಾನಿ ಮೋದಿಯವರು ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಬಳಿ ಯೋಧರಿಗೆ ಸಿಹಿ ಹಂಚುವುದರ ಮೂಲಕ ದೀಪಾವಳಿಯನ್ನು ಆಚರಿಸಿದ್ದಾರೆ. ಎಲ್ಲಾ ಜನರು ತಮ್ಮ ಕುಟುಂಬದ ಜೊತೆ ಬೆಳಕಿನ ಹಬ್ಬವನ್ನು ಆಚರಿಸುವುದು ಸಂಪ್ರದಾಯ.