ಸೀಮಿತ ದಾಳಿಯ ನಂತರ ಉಭಯ ದೇಶಗಳ ಗಡಿಭಾಗಗಳಲ್ಲಿ ಉದ್ಭವವಾಗಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಭಾರತೀಯ ಸೇನಾ ಪಡೆ ಉನ್ನತ ಅಧಿಕಾರಿಗಳು ಗಡಿರೇಖೆಯಲ್ಲಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದು, ಮುಂದೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ಗಡಿಯಲ್ಲಿರುವ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಸೆಪ್ಟೆಂಬರ್ 29 ರಂದು