ಭಾರತದ ವಿಪಕ್ಷಗಳನ್ನು ಆಸ್ಟ್ರೇಲಿಯಾದ ವಿಪಕ್ಷಗಳ ಜೊತೆ ಹೋಲಿಸಿ ತಿರುಗೇಟು ನೀಡಿದ್ದಾರೆ. 6 ದಿನಗಳ ಪ್ರವಾಸ ಮುಗಿಸಿ ಇಂದು ಭಾರತಕ್ಕೆ ಮರಳಿದ ಪ್ರಧಾನಿ ಮೋದಿ, ಆಸ್ಟ್ರೇಲಿಯಾದ ಆಡಳಿತ ಮತ್ತು ವಿರೋಧ ಪಕ್ಷಗಳೆಲ್ಲಾ ತಮ್ಮ ದೇಶಕ್ಕೆ ಮೊದಲ ಆದ್ಯತೆ ನೀಡುತ್ತವೆ ಎಂದಿದ್ದಾರೆ. ಮೊನ್ನೆ ಬ್ರಿಸ್ಬೆನ್ನಲ್ಲಿ ಅನಿವಾಸಿ ಭಾರತೀಯರ ಸಭೆಯ ಬಗ್ಗೆ ಉಲ್ಲೇಖಿಸಿದ ಪ್ರಧಾನಿ ಮೋದಿ, ಒಂದು ಕಮ್ಯುನಿಟಿ ಇವೆಂಟ್ನಲ್ಲಿ ಆಡಳಿತ ಮತ್ತು ವಿಪಕ್ಷಗಳೆಲ್ಲಾ ಒಟ್ಟಾಗಿ ಪಾಲ್ಗೊಂಡಿದ್ವು. ಈ ಮೂಲಕ ಪ್ರಜಾಪ್ರಭುತ್ವದ ಸ್ಪೂರ್ತಿಯನ್ನು