ಜನರೊಂದಿಗೆ ಸಂಪರ್ಕದಲ್ಲಿರಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ| Krishnaveni K| Last Modified ಶನಿವಾರ, 1 ಮೇ 2021 (07:51 IST)
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಮಿತಿ ಮೀರುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ್ದು, ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.

 
ವಿವಿಧ ರಾಜ್ಯಗಳ ಕೊವಿಡ್ ಪರಿಸ್ಥಿತಿ ಬಗ್ಗೆ ಸಚಿವರುಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ ಪ್ರಧಾನಿ ಮೋದಿ ನಿಮ್ಮ ಕ್ಷೇತ್ರಗಳ ಜನರೊಂದಿಗೆ ಸಂಪರ್ಕದಲ್ಲಿರಿ ಎಂದು ಸೂಚನೆ ನೀಡಿದ್ದಾರೆ.
 
ನಿಮ್ಮ ರಾಜ್ಯ, ಕ್ಷೇತ್ರಗಳ ಜನರೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲಿನ ಕುಂದುಕೊರತೆಗಳನ್ನು ಆಲಿಸಿ. ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಅವರ ಅಹವಾಲುಗಳನ್ನು ಸ್ವೀಕರಿಸಿ ಎಂದು ಸೂಚನೆ ನೀಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :