ಡೋಕ್ಲಾಮ್ ವಿವಾದ ಅಂತ್ಯಗೊಂಡ ಮಾರನೇ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಚೀನಾಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಚೀನಾದಲ್ಲಿ ಬ್ರಿಕ್ಸ್ ಸಮಾವೇಶ ಸೆಪ್ಟೆಂಬರ್ 3 ರಿಂದ 5 ರವರೆಗೆ ನಡೆಯಲಿದ್ದು, ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬ್ರಿಕ್ಸ್ ಶೃಂಗಸಭೆಯನ್ನು ಚೀನಾದ ಫುಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್ ನಗರದಲ್ಲಿ ಆಯೋಜಿಸಲಾಗುತ್ತಿದೆ. ಮ್ಯಾನ್ಮಾರ್