ಪ್ರಧಾನಿ ಮೋದಿಗೆ ಅಮೆರಿಕಾದ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ಗೌರವ

ನವದೆಹಲಿ| Krishnaveni K| Last Modified ಮಂಗಳವಾರ, 22 ಡಿಸೆಂಬರ್ 2020 (10:55 IST)
ನವದೆಹಲಿ: ಭಾರತ ಮತ್ತು ಅಮೆರಿಕಾ ನಡುವಿನ ಬಾಂಧವ್ಯ ವೃದ್ಧಿಸುವ ವಿಚಾರದಲ್ಲಿ ಮಾಡಿರುವ ಕೆಲಸಗಳನ್ನು ಗುರುತಿಸಿ ಅಮೆರಿಕಾ ಭಾರತೀಯ ಪ್ರಧಾನಿ ಮೋದಿಗೆ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ನೀಡಿ ಗೌರವಿಸಿದೆ.

 

ಪ್ರಧಾನಿ ಮೋದಿ ಪರವಾಗಿ ಅಮೆರಿಕಾದಲ್ಲಿರುವ ಭಾರತೀಯ ರಾಯಭಾರಿ ತರಣ್ ಜಿತ್ ಸಿಂಗ್ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಯಾನ್ ರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ. ಅಮೆರಿಕಾ ಸಶಸ್ತ್ರ ಪಡೆಯಿಂದ ರಾಜ್ಯ ಅಥವಾ ಸರ್ಕಾರದ ಮುಖ್ಯಸ್ಥರಿಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿ ಇದಾಗಿದೆ.
ಇದರಲ್ಲಿ ಇನ್ನಷ್ಟು ಓದಿ :