ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ನಮ್ಮ ಯೋಧರ ಮೇಲೆ ವಿಶ್ವಾಸವಿಲ್ಲ. ಅದಕ್ಕೇ ಡೋಕ್ಲಾಂ ಬಿಕ್ಕಟ್ಟು ಎದುರಾದಾಗ ಚೀನಾ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದರು ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಹಾಗೂ ಜಾತಿವಾದ ರಾಜಕಾರಣದಲ್ಲಿ ಮುಳುಗಿರುವ ಕಾಂಗ್ರೆಸ್ ನಿಂದ ಹಿಮಾಚಲ ಪ್ರದೇಶವನ್ನು ರಕ್ಷಿಸಬೇಕಿದೆ ಎಂದು ಅವರು ಈ ಸಂದರ್ಭದಲ್ಲಿ ಕರೆ ಕೊಟ್ಟಿದ್ದಾರೆ.ಡೋಕ್ಲಾಂ