ನವದೆಹಲಿ: ಕೊರೋನಾ ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟ ಪುನರಾರಚನೆ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ನಿಷ್ಕ್ರಿಯ ಸಚಿವರನ್ನು ಪದಚ್ಯುತಗೊಳಿಸಿ ಆ ಸ್ಥಾನಕ್ಕೆ ಹೊಸ ಮುಖಗಳನ್ನು ತರಲು ಮೋದಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ದಿವಂಗತ ರಾಮ್ ವಿಲಾಸ್ ಪಾಸ್ವಾನ್, ಸುರೇಶ್ ಅಂಗಡಿರಿಂದ ತೆರವಾದ ಸ್ಥಾನಗಳಿಗೆ ಹೊಸ ಸಚಿವರನ್ನು ನೇಮಕ ಮಾಡಲಿದ್ದಾರೆ.ಮೂಲಗಳ ಪ್ರಕಾರ ವರುಣ್ ಗಾಂಧಿ, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿರುವ ಜ್ಯೋತಿರಾಧಿತ್ಯ ಸಿಂಧಿಯಾ ಮುಂತಾದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ