ಸಂಪುಟ ಪುನರಚನೆ ಮಾಡಲಿರುವ ಪ್ರಧಾನಿ ಮೋದಿ

ನವದೆಹಲಿ| Krishnaveni K| Last Modified ಶುಕ್ರವಾರ, 11 ಜೂನ್ 2021 (09:46 IST)
ನವದೆಹಲಿ: ಪ್ರಧಾನಿ ಮೋದಿ ತಮ್ಮ ಸಂಪುಟದಲ್ಲಿ ಭಾರೀ ಬದಲಾವಣೆ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಆಂಗ್ಲ ವಾಹಿನಿಯೊಂದು ವರದಿ ಮಾಡಿದೆ.  
> ವರದಿಯ ಪ್ರಕಾರ, ಇಂದಿನಿಂದ ಪ್ರಧಾನಿ ಮೋದಿ ಪ್ರತೀ ಸಚಿವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಲಿದ್ದು, ಅವರ ಕಾರ್ಯನಿರ್ವಹಣೆಗೂ ಶ್ರೇಯಾಂಕ ನೀಡಲಿದ್ದಾರೆ. ಇದಾದ ಬಳಿಕ ಸಂಪುಟ ಪುನರಚನೆ ಮಾಡಲಿದ್ದಾರೆ ಎನ್ನಲಾಗಿದೆ.>   ವಿವಿಧ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರ ಒತ್ತಡ ಕಡಿಮೆ ಮಾಡಲು ಅವರ ಜವಾಬ್ಧಾರಿಗಳನ್ನು ಕಡಿತಗೊಳಿಸಲಿದ್ದಾರೆ ಎನ್ನಲಾಗಿದೆ. ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ದೇಶ ಮತ್ತೆ ಸಹಜ ಸ್ಥಿತಿಗೆ ಬರುತ್ತಿರುವ ಬೆನ್ನಲ್ಲೇ ಮೋದಿ ತಮ್ಮ ಸಂಪುಟಕ್ಕೆ ಸರ್ಜರಿ ಮಾಡಲು ಮುಂದಾಗಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :