ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವಿನೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಮೋದಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.ಈ ಸಮಾರಂಭಕ್ಕೆ ದೇಶ, ವಿದೇಶದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅಫ್ಘಾನಿಸ್ತಾನ ಅಧ್ಯಕ್ಷ ಅಬ್ದುಲ್ ಹಮೀದ್, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಒಲಿ,