ನವದೆಹಲಿ: ರಾಜಸ್ಥಾನ ಮತ್ತು ತೆಲಂಗಾಣ ಚುನಾವಣಾ ಕಣ ರಂಗೇರಿದ್ದು, ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪರಸ್ಪರ ಕೆಸರೆರಚಾಟ ನಡೆಸಿದ್ದಾರೆ.ರಾಜಸ್ಥಾನದ ಜೋಧ್ ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರೆ, ತೆಲಂಗಾಣದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.ಜೋಧ್ ಪುರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ಸುಳ್ಳುಗಳ ವಿಶ್ವವಿದ್ಯಾಲಯವಿದ್ದಂತೆ ಎಂದಿದ್ದಾರಲ್ಲದೆ, ತಮಗೆ ಹಿಂದೂ ತತ್ವದ ಬಗ್ಗೆ ಸರಿಯಾದ