Widgets Magazine

ರಾಹುಲ್ ಗಾಂಧಿ ಟ್ವೀಟ್ ಗೆ ಪ್ರಧಾನಿ ಮೋದಿ ನೀಡಿದ ಪ್ರತಿಕ್ರಿಯೆಯಿದು

NewDelhi| Krishnaveni K| Last Modified ಭಾನುವಾರ, 12 ಮಾರ್ಚ್ 2017 (08:59 IST)
ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಬಂದ ಬಳಿಕ ಪ್ರಧಾನಿ ಮೋದಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.

 
ಉತ್ತರ ಪ್ರದೇಶ ಮತ್ತು ಉತ್ತರಖಂಡ ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಗೆಲುವು ದಾಖಲಿಸಿದ ಬಿಜೆಪಿಗೆ ಪ್ರತಿಪಕ್ಷ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭಿನಂದಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ “ಧನ್ಯವಾದಗಳು, ಪ್ರಜಾಪ್ರಭುತ್ವ ದೀರ್ಘ ಕಾಲ ನೆಲೆಗೊಳ್ಳಲಿದೆ” ಎಂದಿದ್ದಾರೆ.
 
ಪಂಚ ರಾಜ್ಯ ಚುನಾವಣೆಗಳ ಪೈಕಿ ಉತ್ತರ ಪ್ರದೇಶ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿತ್ತು. ಇದನ್ನು ಹೀನಾಯವಾಗಿ ಸೋತಿರುವ ಕಾರಣಕ್ಕೆ ರಾಹುಲ್ ಗಾಂಧಿಗೆ ಟೀಕೆಗಳ ಸುರಿಮಳೆಯಾಗುತ್ತಿದೆ. ಆದರೂ, ಉಳಿದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯ ಮೆರೆದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ


ಇದರಲ್ಲಿ ಇನ್ನಷ್ಟು ಓದಿ :