ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ| Krishnaveni K| Last Modified ಶನಿವಾರ, 20 ಅಕ್ಟೋಬರ್ 2018 (09:24 IST)
ನವದೆಹಲಿ: ಹಿಂದಿನ ಸರ್ಕಾರಗಳು ಕೇವಲ ಒಂದು ಕುಟುಂಬವನ್ನು ಜನಪ್ರಿಯಗೊಳಿಸಲು ಯೋಜನೆಗಳನ್ನು ಹೊರತರುತ್ತಿತ್ತು ಎನ್ನುವ ಮೂಲಕ ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಶಿರಡಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹಿಂದಿನ ಸರ್ಕಾರಗಳೂ ಹಲವು ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನ ಮಾಡಿತ್ತು. ಆದರೆ ಅದು ಕುಟುಂಬವನ್ನು ಸಂತುಷ್ಟಗೊಳಿಸಲು ಸೀಮಿತವಾಗಿತ್ತು ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.


ಯೋಜನೆಗಳನ್ನು ಜಾರಿಗೆ ತರುವ ಮೊದಲು ಅವರ ಪಕ್ಷದ ಲಾಭವನ್ನು ಮಾತ್ರ ನೋಡಿಕೊಳ್ಳುತ್ತಿದ್ದರು. ಅದಕ್ಕೆ ತಕ್ಕಂತೆ ಯೋಜನೆ ರೂಪಿಸುತ್ತಿದ್ದರು. ಆದರೆ ನಮ್ಮ ಸರ್ಕಾರ ಜನರ ಹಿತಕ್ಕಾಗಿ ಯೋಜನೆಗಳನ್ನು ಹೊರತರುತ್ತಿವೆ ಎಂದು ಅವರು ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
ಇದರಲ್ಲಿ ಇನ್ನಷ್ಟು ಓದಿ :