ನವದೆಹಲಿ: ನಿನ್ನೆಯಷ್ಟೇ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿಕೊಂಡ ಪ್ರಧಾನಿ ಮೋದಿ ಇಂದು ಕೇದಾರನಾಥನ ದರ್ಶನಕ್ಕೆ ಆಗಮಿಸಲಿದ್ದಾರೆ. ದೇವಾಲಯ ದರ್ಶನದ ನಂತರ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಅಲ್ಲದೆ, ದೇವಾಲಯದ ಬಳಿ ಬೃಹತ್ ವೇದಿಕೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಿ ಆಗಮಿಸಲಿರುವ ಹಿನ್ನಲೆಯಲ್ಲಿ ವಿಮಾನ ನಿಲ್ಧಾಣದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿಗೆ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಮತ್ತು ರಾಜ್ಯಪಾಲ ಕೆಕೆ ಪೌಲ್ ಸಾಥ್ ನೀಡಲಿದ್ದಾರೆ.ತಾಜಾ