ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ. ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13 ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ