ನವದೆಹಲಿ: ಇಂದಿನಿಂದ ಕೇವಲ ಹನ್ನೊಂದು ದಿನ ಮಾತ್ರ ಬಾಕಿಯಿರುವುದರಿಂದ ಅನುಷ್ಠಾನಗಳೆಲ್ಲಾ ಇಂದಿನಿಂದಲೇ ಪ್ರಾರಂಭವಾಗುತ್ತದೆ. ಇದನ್ನು ಮನಸಿನಲ್ಲಿಟ್ಟುಕೊಂಡು ಪ್ರತಿಯೊಬ್ಬರು ಅನುಷ್ಠಾನದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನಾ ಮಹೂರ್ತಕ್ಕೆ ಕೇವಲ 11 ದಿನ ಬಾಕಿ ಉಳಿದಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ರಾಮಪ್ರತಿಷ್ಠಾಪನಾ ಕಾರ್ಯಕ್ರಮದ ಬಗ್ಗೆ ಆಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಇಂಥದ್ದೊಂದು ಐತಿಹಾಸಿಕ ಸಂದರ್ಭಕ್ಕೆ ನಾನು ಸಮಸ್ತ ಭಾರತೀಯರನ್ನು ಪ್ರತಿನಿಧಿಸುವ