ಭುವನೇಶ್ವರ : ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣಾ ಕಾಯ್ದೆ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಸುಭಾಶ್ ಕುಮಾರ್ ಬಿಹಾರಿ ಅವರು ಒಡಿಶಾದ ಕಟಕ್ ನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸುಭಾಶ್ ಕುಮಾರ್ ಬಿಹಾರಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ತೋರುತ್ತದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕಟಕ್ನ ಸಹಾಯಕ ಪೊಲೀಸ್ ಕಮಿಷನರ್ ತಪಸ್ ಚಂದ್ರ ಪ್ರಧಾನ್ ತಿಳಿಸಿದ್ದಾರೆ.ಬಿಹಾರಿ ಅವರು