ಇಂಧೋರ್: ಜನರಿಗೆ ರಕ್ಷಣೆ ಮಾಡಬೇಕಾದ ಪೊಲೀಸರ ಮೇಲೆಯೇ ದೌರ್ಜನ್ಯ ನಡೆದರೆ ಕೇಳುವವರು ಯಾರು? ಇಂತಹದ್ದೇ ಒಂದು ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ಮಾಡಿದ್ದು ಘಟನೆಯ ವಿಡಿಯೋ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿದೆ.ಈ ಸಂಬಂಧ ಸಂತ್ರಸ್ತೆ ಪೊಲೀಸ್ ದೂರು ದಾಖಲಿಸಿದ್ದು, ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಯ ಜೊತೆಗೆ ಈ ಹಿಂದೆ ಸಂತ್ರಸ್ತೆಗೆ ಫೇಸ್ ಬುಕ್ ನಲ್ಲಿ ಸ್ನೇಹವಿತ್ತು.