ಶೀನಾ ಬೋರಾ ಕೊಲೆ ಪ್ರಕರಣ ತನಿಖೆ ಮಾಡಿದ ಪೊಲೀಸ್ ಅಧಿಕಾರಿ ಪತ್ನಿ ಅಸಹಜ ಸಾವು

Mumbai| Krshnaveni K| Last Modified ಬುಧವಾರ, 24 ಮೇ 2017 (11:47 IST)
ಮುಂಬೈ: ಶೀನಾ ಬೋರಾ ಪ್ರಕರಣದಲ್ಲಿ ತನಿಖಾಧಿಕಾರಿಗಳಲ್ಲೊಬ್ಬರಾಗಿದ್ದ ಪೊಲೀಸ್ ಅಧಿಕಾರಿಯ ಪತ್ನಿ ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ.
 
ಪೊಲೀಸ್ ಇನ್ಸ್ ಪೆಕ್ಟರ್ ಧ್ಯಾನೇಶ್ವರ್ ಗನೋರೆ ಕರ್ತವ್ಯ ಮುಗಿಸಿ ಮನೆಗೆ ಮರಳಿದಾಗ ಪತ್ನಿಯ ಮೃತದೇಹ ಪತ್ತೆಯಾಗಿದೆ. ಮನೆಗೆ ಬಂದಾಗ ಪತ್ನಿ ಎಷ್ಟೊತ್ತಾದರೂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ಬಲವಂತವಾಗಿ ಬಾಗಿಲು ತೆರೆದು ನೋಡುವಾಗ ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡುಬಂತು.
 
ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಘಟನೆ ನಡೆದ ಮೇಲಿನಿಂದ ದಂಪತಿಯ  ಪುತ್ರ ನಾಪತ್ತೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿಲ್ಲ. ಪೊಲೀಸರ ತನಿಖೆ ಮುಂದುವರಿದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   ಇದರಲ್ಲಿ ಇನ್ನಷ್ಟು ಓದಿ :