ಚೆನ್ನೈ: ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಜಯಲಲಿತಾ ಸಾವಿನ ಸುದ್ದಿ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಅಮ್ಮ ಆಸ್ಪತ್ರೆಗೆ ದಾಖಲಾಗುವ ಮೊದಲೇ ಸತ್ತಿದ್ದರು ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಿತ್ತು. ಆದರೆ ಈಗ ಮಹತ್ತರವಾದ ವಿಡಿಯೋವೊಂದು ಟಿಟಿವಿ ದಿನಕರನ್ ಬಣದವರು ಬಿಡುಗಡೆ ಮಾಡಿದ್ದಾರೆ. ಬೈ ಎಲೆಕ್ಷನ್ ಹಿನ್ನೆಲೆ ಈ ವಿಡಿಯೋ ರಿಲೀಸ್ ಆಗಿರುವುದು ಮತ್ತಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅವರು ತಮ್ಮ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಈ ವಿಡಿಯೋ ರಿಲೀಸ್ ಮಾಡಿದ್ದಾರೆ