ಹಾಸನ: ಲೋಕಸಭಾ ಚುನಾವಣೆಯಲ್ಲಿ ನೂತನ ಸಂಸದನಾಗಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರ ಸೋಲಿನಿಂದ ನೋವಾಗಿರುವುದಕ್ಕೆ ರಾಜೀನಾಮೆ ನೀಡುತ್ತಿರುವುದಕ್ಕೆ ಕಾರಣವಂತೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾರೂ ಬೇಜಾರು ಮಾಡಿಕೊಳ್ಳಬೇಡಿ. ನಾನು ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಅದನ್ನು ನಮ್ಮ ನಾಯಕರು ಎಷ್ಟರ ಮಟ್ಟಿಗೆ ಸ್ವೀಕರಿಸುತ್ತಾರೆ ಗೊತ್ತಿಲ್ಲ. ಯಾರಿಗೂ ಕೇಳದೆ ನಾನು ಇದನ್ನು ಮಾಡಿದೆ ಎಂದು ಹೇಳಬೇಡಿ. ಗೌಡರು ನಮ್ಮ