ಕೊರೊನಾ ವೈರಸ್ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದ್ದು, ರಾಜ್ಯಗಳು ಕೂಡಲೇ ಎಚ್ಚೆತ್ತುಕೊಂಡು ಆರಂಭದಲ್ಲೇ ಕಡಿವಾಣ ಹಾಕಲು ಸಜ್ಜಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಬುಧವಾರ ರಾಜ್ಯ ಸರಕಾರಗಳ ಜೊತೆ ವೀಡಿಯೊ ಕಾನ್ಫರೆನ್ಸ್ ಸಭೆ ನಡೆಸಿದ ನಂತರ ಭಾಷಣ ಮಾಡಿದ ಅವರು, ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಳವಾಗಿದೆ. ಕೋವಿಡ್ ನಿಂದ ಪಾರಾಗಲು ಲಸಿಕೆ ಉತ್ತಮ ಸಾಧನವಾಗಿದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಕಾರದಿಂದ