ಮುಂಬೈ : ಮಹಾರಾಷ್ಟ್ರದಲ್ಲಿ ಇನ್ನು ಸರ್ಕಾರ ರಚನೆಯಾಗದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವರ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವರ್, ವಿಧಾನ ಸಭೆ ಅವಧಿಯ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದ್ದು, ನವಂಬರ್ 7ರೊಳಗೆ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ವಾರಗಳೇ ಕಳೆದರೂ