Widgets Magazine

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ; ರಾಜ್ಯಪಾಲರ ವಿರುದ್ಧ ಕಿಡಿಕಾರಿದ ಶಿವಸೇನೆ

ನವದೆಹಲಿ| pavithra| Last Modified ಬುಧವಾರ, 13 ನವೆಂಬರ್ 2019 (06:42 IST)
ನವದೆಹಲಿ : ಮಹಾರಾಷ್ಟ್ರದಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತ ಜಾರಿಮಾಡಿದ ಹಿನ್ನಲೆಯಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಬಿಜೆಪಿಯವರ ಅಪ್ಪಣೆಯಂತೆ ನಡೆಯುತ್ತಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ಸರ್ಕಾರದ ರಚನೆಗೆ ಶಿವಸೇನೆಗೆ ಅವಕಾಶ ಮಾಡಿಕೊಡದೆ ರಾಜ್ಯಪಾಲರು ಏಕಾಏಕಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ. ಈ ಮೂಲಕ ಬಿಜೆಪಿ ರಚನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.


ಮಹಾರಾಷ್ಟ್ರದಲ್ಲಿ ಚುನಾವಣೆ ಫಲಿತಾಂಶ ಘೋಷಣೆ ಆದಾಗಿನಿಂದಲೂ ಯಾವ ಪಾರ್ಟಿಯ ಮುಖ್ಯಸ್ಥರು ಸರಕಾರ ರಚನೆ ಮಾಡೋಕೆ ಮುಂದಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲು ರಾಜ್ಯಪಾಲರು ಕೇಂದ್ರಕ್ಕೆ ಶಿಫಾರಸ್ಸನ್ನು ಮಾಡಿದ್ದಾರೆ.ಇದಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :