ನವದೆಹಲಿ : ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ ಕಣ ರಂಗೇರಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಸಂಖ್ಯಾಬಲದ ಜಟಾಪಟಿ ನಡೆಯುತ್ತಿದೆ.ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ.ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿಯಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಮುಗಿಯಲಿದ್ದು, ಆ ಸ್ಥಾನಕ್ಕೆ ಚುನಾವಣೆಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ.ನಾಮನಿರ್ದೇಶನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಜುಲೈ 18