ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿರುವ ಪ್ರಧಾನಿ ಮೋದಿ

ನವದೆಹಲಿ| pavithra| Last Updated: ಮಂಗಳವಾರ, 3 ಮಾರ್ಚ್ 2020 (08:03 IST)
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದ್ದ ನಾಯಕರಲ್ಲಿ ಒಬ್ಬರಾದ ಪ್ರಧಾನಿ ಮೋದಿ ಇದೀಗ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.


ಯಾವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪ್ರಧಾನಿ ಮೋದಿಯವರು ದೇಶದ ಆಗುಹೋಗುಗಳನ್ನು, ತಾವು ಭಾಗವಹಿಸಿದ್ದ ಕಾರ್ಯಕ್ರಮಗಳ ಬಗ್ಗೆ, ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಆದರೆ ಈಗ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ಭಾನುವಾರದಿಂದ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ದೂರ ಉಳಿಯಲು ಚಿಂತಿಸುತ್ತಿದ್ದೇನೆ, ಫೇಸ್ ಬುಕ್, ಟ್ವೀಟರ್, ಇನ್ ಸ್ಟಾಗ್ರಾಂ ಹಾಗೂ ಯೂಟ್ಯೂಬ್ ಗಳಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಈ ಕುರಿತು ಮುಂದೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಏಂದು ತಿಳಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :