ನವದೆಹಲಿ : ರೋಜಗಾರ್ ಮೇಳದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ 70,000 ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ರೈಲ್ವೆ, ಅಂಚೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭರ್ತಿಯಾದ ನೌಕರರಿಗೆ ನೇಮಕಾತಿ ಪತ್ರ ನೀಡಿದರು. ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಅಜಾದಿ ಕಾ ಅಮೃತ್ ಕಾಲ ಪ್ರಾರಂಭವಾಗಿರುವ ಹಿನ್ನಲೆ ಈ ಅವಧಿಯಲ್ಲಿ ಸರ್ಕಾರಿ ಸೇವೆಗಳಿಗೆ ಸೇರ್ಪಡೆಯಾಗುವವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ