ಭುವನೇಶ್ವರ್ : ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ. ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್ ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು