ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿಗಳು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್, ಪ್ರಧಾನಿಗೆ ನಾಚಿಕೆಯಾಗಬೇಕು ಎಂದು ಕಟು ಶಬ್ದವನ್ನು ಪ್ರಯೋಗಿಸಿದ್ದಾರೆ. ಅಲ್ಲದೇ ತನ್ನ ರಾಜ್ಯದಲ್ಲಿ 2015 ರಿಂದ ಇಂಧನ ತೆರಿಗೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.ರಾಜ್ಯಗಳನ್ನು