ನವದೆಹಲಿ : ಇಂದು ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಮೂರನೇ ಅವತರಣಿಕೆಯಲ್ಲಿ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆಯೋಜಿಸಿರುವ ಈ ಕಾರ್ಯಕ್ರಮ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ಈ ಕಾರ್ಯಕ್ರಮದಲ್ಲಿ ದೇಶದ್ಯಂತ ವಿವಿಧ ಶಾಲೆಗಳಿಂದ ಆಯ್ದ ಸುಮಾರು 2 ಸಾವಿರದಷ್ಟು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಅದರಲ್ಲಿ ಕರ್ನಾಟಕದಿಂದ 42 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ