ನವದೆಹಲಿ: ಹರ್ಯಾಣದಲ್ಲಿ ಐದು ಎಕರೆ ಕೃಷಿ ಭೂಮಿ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಹೆಸರನ್ನು ಜಾರಿ ನಿರ್ದೇಶನಾಲಯ ಆರೋಪಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.ಇದೇ ಮೊದಲ ಬಾರಿಗೆ ಪ್ರಿಯಾಂಕ ಹೆಸರು ಇ.ಡಿ. ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಆದರೆ ಆರೋಪ ಪಟ್ಟಿಯಲ್ಲಿ ಪ್ರಿಯಾಂಕ ಹೆಸರು ಉಲ್ಲೇಖ ಮಾಡಲಾಗಿದೆಯಷ್ಟೇ ಹೊರತು ಆರೋಪಿ ಎಂದು ಹೆಸರಿಸಲಾಗಿಲ್ಲ.ಪ್ರಿಯಾಂಕ ಹರ್ಯಾಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಎಚ್. ಎಲ್. ಪಹ್ವಾ ಎಂಬಾತನಿಂದ ಐದು