ಮುಂಬೈ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಡೆಸಿರುವ ಪ್ರತಿಭಟನೆ ವೇಳೆ ಕೆಲ ಪ್ರತಿಭಟನಾಕಾರರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗಿರುವ ಘಟನೆ ಶುಕ್ರವಾರ ಪುಣೆಯಲ್ಲಿ ನಡೆದಿದೆ.ಇದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ಮಹಾರಾಷ್ಟ್ರದ ಕೆಲ ಬಿಜೆಪಿ ನಾಯಕರು ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.ಪಿಎಫ್ಐ ಸಂಘಟನೆಯ ಮೇಲೆ ರಾಷ್ಟ್ರವ್ಯಾಪಿಯಾಗಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಇದನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ಶುಕ್ರವಾರ ಪುಣೆ ನಗರದ