ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯನ್ನು ಟೀಕಿಸಿದಕ್ಕೆ ಫ್ರೊಫೆಸರ್ ಗೆ ಬಿತ್ತು ಗೂಸಾ

ಪಾಟ್ನಾ| pavithra| Last Modified ಭಾನುವಾರ, 19 ಆಗಸ್ಟ್ 2018 (07:28 IST)
ಪಾಟ್ನಾ : ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಟೀಕಿಸಿದಕ್ಕೆ ಫ್ರೊಫೆಸರ್ ಒಬ್ಬರ ಮೇಲೆ 20-25 ಜನರ ಗುಂಪು ಹಲ್ಲೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಮೋತಿಹಾರಿಯಲ್ಲಿರುವ ಮಹಾತ್ಮಾ ಗಾಂಧಿ ಸೆಂಟ್ರಲ್ ಫ್ರೊಫೆಸರ್ ರಾದ
ಸಂಜಯ್ ಕುಮಾರ್ ಎಂಬುವವರು ಫೇಸ್ ಬುಕ್ ನಲ್ಲಿ ವಾಜಪೇಯಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಿಕ 20-25 ಜನರು ಗುಂಪು ಕಟ್ಟಿಕೊಂಡು ಬಂದು ಸಂಜಯ್ ಮೇಲೆ ಹಲ್ಲೆ ನಡೆಸಿದ್ದಾರೆ.


ಫ್ರೊಫೆಸರ್ ಸಂಜಯ್ ಕುಮಾರ್ ಅವರು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ಸಂಜಯ್ ಕುಮಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಪಾಟ್ನಾದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ


ಇದರಲ್ಲಿ ಇನ್ನಷ್ಟು ಓದಿ :