ದಿಸ್ಪುರ್ : ಬಹುಪತ್ನಿತ್ವ ನಿಷೇಧಕ್ಕೆ ಅಸ್ಸಾಂ ಸರ್ಕಾರ ಮುಂದಾಗಿದೆ. ಈ ಸಂಬಂಧ ಡಿಸೆಂಬರ್ನಲ್ಲಿ ರಾಜ್ಯ ವಿಧಾನಸಭೆಯಲ್ಲಿ ಮಸೂದೆ ಮಂಡಿಸುವ ಸಾಧ್ಯತೆಯಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ತಿನ್ಸುಕಿಯಾದಲ್ಲಿ ಬಿಜೆಪಿ ಮಿತ್ರ ಪಕ್ಷಗಳ ಸಭೆಯನ್ನುದ್ದೇಶಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಮುಂದಿನ 45 ದಿನಗಳಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬಹುಪತ್ನಿತ್ವವನ್ನು ನಿಷೇಧಿಸುವ ಮಸೂದೆಯನ್ನು ಅಂತಿಮಗೊಳಿಸಲಿದೆ ಎಂದು ಹೇಳಿದ್ದಾರೆ.ರಾಜ್ಯ ಸರ್ಕಾರ ಬಹುಪತ್ನಿತ್ವ ನಿಷೇಧಿಸಬೇಕೆ ಅಥವಾ ಬೇಡವೇ ಎಂಬುದನ್ನು ವಿಶ್ಲೇಷಿಸಲು ಕಾನೂನು