ಮುಂಬೈ : ವಾಟ್ಸಪ್ ಸ್ಟೇಟಸ್ ಮೂಲಕ ಇತರರಿಗೆ ಏನನ್ನಾದರೂ ತಿಳಿಸುವಾಗ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ಹೇಳಿದೆ. ಧಾರ್ಮಿಕ ಗುಂಪಿನ ವಿರುದ್ಧ ದ್ವೇಷವನ್ನು ಹರಡಿದ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಈ ಹೇಳಿಕೆ ನೀಡಿದೆ. ಅಲ್ಲದೇ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಕೋರ್ಟ್ ನಿರಾಕರಿಸಿದೆ.ಧಾರ್ಮಿಕ ಭಾವನೆ ಹಾಗೂ ನಂಬಿಕೆಯನ್ನು ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ ಬಗ್ಗೆ ದಾಖಲಾಗಿರುವ ಎಫ್ಐಆರ್ನ್ನು ರದ್ದುಗೊಳಿಸುವಂತೆ 27 ವರ್ಷದ ಕಿಶೋರ್ ಲ್ಯಾಂಡ್ಕರ್