ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿರುವ ಸಿಐಡಿ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಮತ್ತು ಎಡಿಜಿಪಿ ಪ್ರತಾಪ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಡಿಜಿಪಿ ಕಿಶೋರ್ ಚಂದ್ರ ನೀಡಿರುವ ಮಾಹಿತಿಗಳು ಈ ಮುಂದಿನಂತಿವೆ:*ಆರೋಪಿಗಳಲ್ಲಿ ಕೆಲವರು ಹತ್ತು ವರ್ಷದಿಂದ ಲೀಕ್ ದಂಧೆಯಲ್ಲಿದ್ದಾರೆ. *ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.