ನವದೆಹಲಿ : ಮತದಾರರ ಪಟ್ಟಿ ಜತೆ ಆಧಾರ್ ಜೋಡಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ನಿಯಮಾವಳಿ ಪ್ರಕಟಿಸಲಿದೆ ಎಂದು ಶನಿವಾರವಷ್ಟೇ ನಿವೃತ್ತರಾದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಮಾಡುವುದು ಐಚ್ಛಿಕ. ಆಧಾರ್ ನೀಡಲು ಬಯಸದ ವ್ಯಕ್ತಿಗಳು ಅದಕ್ಕೆ ಸಕಾರಣಗಳನ್ನು ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಆಧಾರ್ ಜೋಡಣೆಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಪ್ರಸ್ತಾವಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಇದಲ್ಲದೆ